ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಅನ್ನು ಮಹತ್ವಾಕಾಂಕ್ಷಿ ಉದ್ಯಮಿಗಳಿಗಾಗಿ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ವಿವರಗಳನ್ನು ಅರ್ಥಮಾಡಿಕೊಳ್ಳಲು ಬಯಸುವವರಿಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಬಗ್ಗೆ ಸಹ ಅಗತ್ಯ ಮಾಹಿತಿಯನ್ನು ಈ ಕೋರ್ಸ್ ಒದಗಿಸುತ್ತದೆ. ಜೊತೆಗೆ ತಮ್ಮ ಬಿಸಿನೆಸ್ ಗಾಗಿ ನವೀನ ಆಲೋಚನೆಗಳನ್ನು ಹೊಂದಿರುವ ಆದರೆ ಹೆಚ್ಚಿನ ಹಣಕಾಸಿನ ಸಂಪನ್ಮೂಲಗಳ ಕೊರತೆಯನ್ನು ಎದುರಿಸುತ್ತಿರುವ ವ್ಯಕ್ತಿಗಳಿಗಾಗಿ ಈ ಕೋರ್ಸ್ ಹೆಚ್ಚು ಸೂಕ್ತವಾಗಿದೆ.
ಅರ್ಹತಾ ಮಾನದಂಡಗಳು, ಸಾಲದ ವಿವರಗಳು, ಅರ್ಜಿ ಪ್ರಕ್ರಿಯೆ ಮತ್ತು ಸಾಲಕ್ಕೆ ಅಗತ್ಯವಿರುವ ದಾಖಲಾತಿಗಳನ್ನು ಒಳಗೊಂಡಂತೆ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಸಹ ಈ ಕೋರ್ಸ್ ಒಳಗೊಂಡಿದೆ. ಇದರ ಜೊತೆಗೆ ಮಾರುಕಟ್ಟೆ ಸಂಶೋಧನೆ, ಉತ್ಪನ್ನ ಅಭಿವೃದ್ಧಿ ಮತ್ತು ಗ್ರಾಹಕರ ಸ್ವಾಧೀನ ಸೇರಿದಂತೆ ಭಾರತದಲ್ಲಿನ ಒಟ್ಟಾರೆ ಉದ್ಯಮಶೀಲ ಪರಿಸರ ವ್ಯವಸ್ಥೆಯ ಒಳನೋಟಗಳನ್ನು ಸಹ ಕೋರ್ಸ್ ಒದಗಿಸುತ್ತದೆ.
ಇಂಡಸ್ಟ್ರಿ ಎಕ್ಸ್ಪರ್ಟ್ ಗಳು ಈ ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಅನ್ನು ಯಶಸ್ವಿಯಾಗಿ ಮುನ್ನಡೆಸಲಿದ್ದಾರೆ. ಈ ಕೋರ್ಸ್ ಅನ್ನು ಇಂಟರಾಕ್ಟಿವ್ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಇದರ ಜೊತೆಗೆ ಪ್ರಾಯೋಗಿಕ ಉದಾಹರಣೆಗಳು ಮತ್ತು ಕೇಸ್ ಸ್ಟಡೀಸ್ ಅನ್ನು ಸಹ ಒದಗಿಸಲಾಗಿದೆ ಮತ್ತು ಕಲಿಯುವವರಿಗೆ ಪ್ರೋಸೆಸ್ ಅನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.
ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ, ನೀವು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ಎಲ್ಲ ಜ್ಞಾನ ಮತ್ತು ಕೌಶಲ್ಯಗಳನ್ನು ಹೊಂದಿರುತ್ತೀರಿ. ಇದರ ಜೊತೆಗೆ ಅಗತ್ಯವಿರುವ ದಾಖಲಾತಿಗಳು, ಅರ್ಹತಾ ಮಾನದಂಡಗಳು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ಹಂತಗಳ ಬಗ್ಗೆಯೂ ಸಹ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳುತ್ತೀರಿ. ಒಟ್ಟಾರೆಯಾಗಿ, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಮಹತ್ವಾಕಾಂಕ್ಷಿ ಉದ್ಯಮಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಇದರ ಬಗ್ಗೆ ತಿಳಿದುಕೊಳ್ಳಲು ಬಯಸುವವರಿಗೆ ಉಪಯುಕ್ತವಾಗಿದೆ.
ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್‌ನ ಪರಿಚಯದ ಜೊತೆಗೆ ಅದರ ಉದ್ದೇಶಗಳು ಮತ್ತು ಭಾರತದಲ್ಲಿ ಅದು ಉದ್ಯಮಶೀಲತೆಯನ್ನು ಹೇಗೆ ಉತ್ತೇಜಿಸುತ್ತದೆ ಎಂಬುದನ್ನು ಒಳಗೊಂಡಿದೆ.
ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ವಿವಿಧ ವೈಶಿಷ್ಟ್ಯಗಳನ್ನು ವಿವರಿಸುತ್ತದೆ ಮತ್ತು ಈ ಯೋಜನೆ ಅಡಿ ಪಡೆಯಬಹುದಾದ ಗರಿಷ್ಠ ಸಾಲದ ಮೊತ್ತದ ಬಗ್ಗೆ ತಿಳಿಸುತ್ತದೆ.
ಈ ಮಾಡ್ಯೂಲ್, ವಯಸ್ಸು, ಲಿಂಗ, ಶೈಕ್ಷಣಿಕ ಅರ್ಹತೆ ಮತ್ತು ಇತರ ಅಂಶಗಳನ್ನು ಒಳಗೊಂಡಂತೆ ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಅನ್ನು ಪಡೆದುಕೊಳ್ಳಲು ಅರ್ಹತೆಯ ಮಾನದಂಡಗಳನ್ನು ಒಳಗೊಂಡಿದೆ.
ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್‌ಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತದೆ
ಈ ಮಾಡ್ಯೂಲ್, ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಅನುಮೋದನೆಗೆ ತೆಗೆದುಕೊಳ್ಳುವ ಸಮಯ ಸೇರಿದಂತೆ ಹಂತ-ಹಂತದ ಪ್ರಕ್ರಿಯೆಯ ಬಗ್ಗೆ ಮಾಹಿತಿ ತಿಳಿಸುತ್ತದೆ.
ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಅಡಿ ಸಾಲ ನೀಡುವ ಬ್ಯಾಂಕ್‌ಗಳ ಪಟ್ಟಿ ಮತ್ತು ಸಾಲವನ್ನು ಪಡೆಯಲು ಇರಬೇಕಾದ ಬಿಸಿನೆಸ್ ಅರ್ಹತೆ ಬಗ್ಗೆ ಮಾಹಿತಿ ಒದಗಿಸುತ್ತದೆ.
ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಪ್ರಯೋಜನಗಳ ಬಗ್ಗೆ ಜೊತೆಗೆ ಸಾಲದ ಅವಧಿ, ಬಡ್ಡಿ ದರಗಳು ಮತ್ತು ಮರುಪಾವತಿ ಆಯ್ಕೆಗಳ ಕುರಿತಾಗಿ ಕೇಳಿಬರುವ ಪ್ರಶ್ನೆಗಳಿಗೆ ಉತ್ತರಿಸುತ್ತದೆ.
- ಫಂಡಿಂಗ್ ಬಯಸುತ್ತಿರುವ ಮಹತ್ವಾಕಾಂಕ್ಷಿ ಉದ್ಯಮಿಗಳು
- ಬಿಸಿನೆಸ್ ಅನ್ನು ಪ್ರಾರಂಭಿಸಲು ಬಯಸುತ್ತಿರುವ ಮಹಿಳಾ ಉದ್ಯಮಿಗಳು
- ಉದ್ಯಮಶೀಲತೆ ಬಗ್ಗೆ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು
- ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು ಅರ್ಥಮಾಡಿಕೊಳ್ಳಲು ಬಯಸುವ ವ್ಯಕ್ತಿಗಳು
- ಸಾಲದ ಬಗ್ಗೆ ಮಾಹಿತಿ ಪಡೆಯಲು ಬಯಸುವ ಸ್ಟಾರ್ಟ್-ಅಪ್ ಸಂಸ್ಥಾಪಕರು
- ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಅರ್ಹತಾ ಮಾನದಂಡಗಳ ಬಗ್ಗೆ ತಿಳಿಯಿರಿ
- ಸಾಲದ ಅರ್ಜಿಗೆ ಅಗತ್ಯವಾದ ದಾಖಲೆಗಳನ್ನು ಅನ್ವೇಷಿಸಿ
- ಮಾರುಕಟ್ಟೆ ಸಂಶೋಧನೆ ಮತ್ತು ಉತ್ಪನ್ನ ಅಭಿವೃದ್ಧಿ ಪಡಿಸುವ ಬಗ್ಗೆ ತಿಳಿದುಕೊಳ್ಳಿ
- ಅಪ್ಲಿಕೇಶನ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ವಿವಿಧ ಹಂತಗಳ ಬಗ್ಗೆ ತಿಳಿಯಿರಿ
- ಭಾರತದಲ್ಲಿನ ಉದ್ಯಮಶೀಲ ಪರಿಸರ ವ್ಯವಸ್ಥೆ ಬಗ್ಗೆ ಅರ್ಥಮಾಡಿಕೊಳ್ಳಿ
ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...