ಈ ಕೋರ್ಸ್ ಒಳಗೊಂಡಿದೆ
ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಅನ್ನು ಮಹತ್ವಾಕಾಂಕ್ಷಿ ಉದ್ಯಮಿಗಳಿಗಾಗಿ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ವಿವರಗಳನ್ನು ಅರ್ಥಮಾಡಿಕೊಳ್ಳಲು ಬಯಸುವವರಿಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಬಗ್ಗೆ ಸಹ ಅಗತ್ಯ ಮಾಹಿತಿಯನ್ನು ಈ ಕೋರ್ಸ್ ಒದಗಿಸುತ್ತದೆ. ಜೊತೆಗೆ ತಮ್ಮ ಬಿಸಿನೆಸ್ ಗಾಗಿ ನವೀನ ಆಲೋಚನೆಗಳನ್ನು ಹೊಂದಿರುವ ಆದರೆ ಹೆಚ್ಚಿನ ಹಣಕಾಸಿನ ಸಂಪನ್ಮೂಲಗಳ ಕೊರತೆಯನ್ನು ಎದುರಿಸುತ್ತಿರುವ ವ್ಯಕ್ತಿಗಳಿಗಾಗಿ ಈ ಕೋರ್ಸ್ ಹೆಚ್ಚು ಸೂಕ್ತವಾಗಿದೆ.
ಅರ್ಹತಾ ಮಾನದಂಡಗಳು, ಸಾಲದ ವಿವರಗಳು, ಅರ್ಜಿ ಪ್ರಕ್ರಿಯೆ ಮತ್ತು ಸಾಲಕ್ಕೆ ಅಗತ್ಯವಿರುವ ದಾಖಲಾತಿಗಳನ್ನು ಒಳಗೊಂಡಂತೆ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಸಹ ಈ ಕೋರ್ಸ್ ಒಳಗೊಂಡಿದೆ. ಇದರ ಜೊತೆಗೆ ಮಾರುಕಟ್ಟೆ ಸಂಶೋಧನೆ, ಉತ್ಪನ್ನ ಅಭಿವೃದ್ಧಿ ಮತ್ತು ಗ್ರಾಹಕರ ಸ್ವಾಧೀನ ಸೇರಿದಂತೆ ಭಾರತದಲ್ಲಿನ ಒಟ್ಟಾರೆ ಉದ್ಯಮಶೀಲ ಪರಿಸರ ವ್ಯವಸ್ಥೆಯ ಒಳನೋಟಗಳನ್ನು ಸಹ ಕೋರ್ಸ್ ಒದಗಿಸುತ್ತದೆ.
ಇಂಡಸ್ಟ್ರಿ ಎಕ್ಸ್ಪರ್ಟ್ ಗಳು ಈ ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಅನ್ನು ಯಶಸ್ವಿಯಾಗಿ ಮುನ್ನಡೆಸಲಿದ್ದಾರೆ. ಈ ಕೋರ್ಸ್ ಅನ್ನು ಇಂಟರಾಕ್ಟಿವ್ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಇದರ ಜೊತೆಗೆ ಪ್ರಾಯೋಗಿಕ ಉದಾಹರಣೆಗಳು ಮತ್ತು ಕೇಸ್ ಸ್ಟಡೀಸ್ ಅನ್ನು ಸಹ ಒದಗಿಸಲಾಗಿದೆ ಮತ್ತು ಕಲಿಯುವವರಿಗೆ ಪ್ರೋಸೆಸ್ ಅನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.
ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ, ನೀವು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ಎಲ್ಲ ಜ್ಞಾನ ಮತ್ತು ಕೌಶಲ್ಯಗಳನ್ನು ಹೊಂದಿರುತ್ತೀರಿ. ಇದರ ಜೊತೆಗೆ ಅಗತ್ಯವಿರುವ ದಾಖಲಾತಿಗಳು, ಅರ್ಹತಾ ಮಾನದಂಡಗಳು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ಹಂತಗಳ ಬಗ್ಗೆಯೂ ಸಹ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳುತ್ತೀರಿ. ಒಟ್ಟಾರೆಯಾಗಿ, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಮಹತ್ವಾಕಾಂಕ್ಷಿ ಉದ್ಯಮಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಇದರ ಬಗ್ಗೆ ತಿಳಿದುಕೊಳ್ಳಲು ಬಯಸುವವರಿಗೆ ಉಪಯುಕ್ತವಾಗಿದೆ.
ಈ ಕೋರ್ಸ್ಅನ್ನು ಯಾರು ಪಡೆಯಬಹುದು?
ಫಂಡಿಂಗ್ ಬಯಸುತ್ತಿರುವ ಮಹತ್ವಾಕಾಂಕ್ಷಿ ಉದ್ಯಮಿಗಳು
ಬಿಸಿನೆಸ್ ಅನ್ನು ಪ್ರಾರಂಭಿಸಲು ಬಯಸುತ್ತಿರುವ ಮಹಿಳಾ ಉದ್ಯಮಿಗಳು
ಉದ್ಯಮಶೀಲತೆ ಬಗ್ಗೆ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು
ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು ಅರ್ಥಮಾಡಿಕೊಳ್ಳಲು ಬಯಸುವ ವ್ಯಕ್ತಿಗಳು
ಸಾಲದ ಬಗ್ಗೆ ಮಾಹಿತಿ ಪಡೆಯಲು ಬಯಸುವ ಸ್ಟಾರ್ಟ್-ಅಪ್ ಸಂಸ್ಥಾಪಕರು
ಈ ಕೋರ್ಸ್ ನಿಂದ ನೀವು ಏನನ್ನು ಕಲಿಯುತ್ತೀರಿ?
ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಅರ್ಹತಾ ಮಾನದಂಡಗಳ ಬಗ್ಗೆ ತಿಳಿಯಿರಿ
ಸಾಲದ ಅರ್ಜಿಗೆ ಅಗತ್ಯವಾದ ದಾಖಲೆಗಳನ್ನು ಅನ್ವೇಷಿಸಿ
ಮಾರುಕಟ್ಟೆ ಸಂಶೋಧನೆ ಮತ್ತು ಉತ್ಪನ್ನ ಅಭಿವೃದ್ಧಿ ಪಡಿಸುವ ಬಗ್ಗೆ ತಿಳಿದುಕೊಳ್ಳಿ
ಅಪ್ಲಿಕೇಶನ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ವಿವಿಧ ಹಂತಗಳ ಬಗ್ಗೆ ತಿಳಿಯಿರಿ
ಭಾರತದಲ್ಲಿನ ಉದ್ಯಮಶೀಲ ಪರಿಸರ ವ್ಯವಸ್ಥೆ ಬಗ್ಗೆ ಅರ್ಥಮಾಡಿಕೊಳ್ಳಿ
ಅಧ್ಯಾಯಗಳು